ಕೋವಿಡ್ ನಿರ್ವಹಣೆಗಾಗಿ ಪ್ರತಿ ಗ್ರಾ.ಪಂಗೆ 50 ಸಾವಿರ ಅನುದಾನ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಘೋಷಣೆ
ಬೆಳಗಾವಿ: ಹಳ್ಳಿಗಳಲ್ಲಿ ಹರಡುತ್ತಿರುವ ಕೊವಿಡ್ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್ಗೂ 50 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಕೊವಿಡ್ ನಿರ್ವಹಣಾ ಸಭೆಯ ನಂತರ ಯಡಿಯೂರಪ್ಪ ಘೋಷಣೆ ಮಾಡಿದರು. ಕೊವಿಡ್ನಿಂದ ಅನಾಥರಾದ ಮಕ್ಕಳಿಗೆ ಯಾವುದೇ ತೊಂದರೆ ಆಗಲು ಸರ್ಕಾರ ಅವಕಾಶ ನೀಡುವುದಿಲ್ಲ. ಅನಾಥ ಮಕ್ಕಳಿಗಾಗಿ ಈಗಾಗಲೇ ಪ್ಯಾಕೇಜ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ನಂತರ ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಅಧಿಕಾರಿಗಳ ನಡುವಿನ ಸಮಸ್ಯೆ ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ತಕ್ಷಣ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಮುಂದುವರೆದು ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ಒಂದೂವರೆ ಎರಡು ತಿಂಗಳ ನಂತರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಪರೀಕ್ಷೆ ನಡೆಸುವುದರಿಂದ ಮಕ್ಕಳಿಗೆ ಎನೂ ತೊಂದರೆ ಆಗುದ ರೀತಿ ನೋಡಿಕೊಳ್ಳುತ್ತೇವೆ. ಪೋಷಕರು ಕೂಡ ಈ ಬಗ್ಗೆ ಗೊಂದಲ ಆಗುವುದು ಬೇಡ ಎಂದು ಮನವಿ ಮಾಡಿದ್ದಾರೆ.