ಕೊರೋನಾ ಹಿನ್ನೆಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ
ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದ ಸಚಿವ ಸುರೇಶ್ ಕುಮಾರ್
May 13, 2021, 17:54 IST
ಬೆಂಗಳೂರು: ಜೂನ್ 21ಕ್ಕೆ ನಿಗದಿಯಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಪೋಷಕರು, ವಿಧ್ಯಾರ್ಥಿಗಳು ಮತ್ತು ವಿವಿಧ ಶಾಲಾ ಸಂಘಟನೆಗಳ ಆತಂಕವನ್ನು ಗಮನಿಸಿ ಈ ನಿರ್ಆದರ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕೊರೋನಾ ಹರಡುವಿಕೆ ನಿಯಂತ್ರಣಕ್ಕೆ ಬಂದ ನಂತರ ಪರೀಕ್ಷೆಗೂ ಮುನ್ನ ತಿಳಿಸಲಾಗುತ್ತದೆ ವಿಧ್ಯಾರ್ಥಿಗಳು ವಿಚಲಿತರಾಗದೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.