ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ "ಕನ್ನಡಿಗ" ಟೀಸರ್ ರಿಲೀಸ್

ಟೀಸರ್ ಬಿಡುಗಡೆ ಮಾಡಿ ಆಶೀರ್ವಾದ ಕೋರಿದ ಚಿತ್ರತಂಡ

 

ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಜನ್ಮದಿನಕ್ಕೆಂದು "ಕನ್ನಡಿಗ" ಚಿತ್ರ ತಂಡ ಟೀಸರ್ ಬಿಡುಗಡೆ ಮಾಡಿದೆ. ಕನ್ನಡಿಗ ಚಿತ್ರದ ನಿರ್ದೇಶಕ ಗಿರಿರಾಜ್ ಬಿಎಂ ಅವರು ಸಾಮಾಜಿಕ ಜಾಲತಾನದಲ್ಲಿ ಟೀಸರ್ ಬಿಡುಗಡೆ ಮಾಡಿ ಅಭಿಮಾನಿಗಳ ಆಶೀರ್ವಾದ ಕೋರಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಅವರು ತಲೆಮಾರುಗಳಿಂದ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಕಾಪಾಡುತ್ತಾ ಬಂದ ಕುಟುಂಬದ ಸದಸ್ಯರಾಗಿ ಅಭಿನಯಿಸಿದ್ದಾರೆ.

ಈ ಚಿತ್ರದ ಮೂಲಕ ಟಾಮ್ ಆಲ್ಟರ್ ಅವರ ಮಗ ಜೇಮೀ ಆಲ್ಟರ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ. ಜೇಮೀ ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಕನ್ನಡ-ಇಂಗ್ಲಿಷ್ ನಿಘಂಟನ್ನು ನಿರ್ಮಿಸಿ ಹೆಸರಾದ ಕಿಟ್ಟೆಲ್ ಪಾತ್ರದ ಬಗ್ಗೆ ತಿಳಿಸುವ ಚಿತ್ರವಾಗಿದೆ.

ಜಯಶ್ರೀ, ಬಾಲಾಜಿ ಮನೋಹರ್ ಇತರರು ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿರುವುದು ವಿಶೇಷ, ಚಿತ್ರದ ಕೆಲಸ ಬಹುಪಾಲು ಮುಗಿದಿದ್ದು, ಸೆನ್ಸಾರ್ ಕೂಡ ಮುಗಿದಿದೆ ಲಾಕ್ ಡೌನ್ ಸಡಿಲಿಕೆಯ ನಂತರ ಚಿತ್ರ ಬಿಡುಗಡೆಯಾಗೋ ಸಾಧ್ಯತೆ ಇದೆ.