ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’

 

ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ 'ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ. ಅಂದ್ರೆ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಸುಭಾಷ್ ಕರಣ್ ಅವರು ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘ಚಂದ್ರಮುಖಿ 2’ ಚಿತ್ರ ನಿರ್ಮಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಆರ್.ಡಿ. ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಈ ಸಿನಿಮಾಗಿದೆ. ಕಂಗನಾ ರಣಾವತ್ ಜೊತೆ ರಾಘವ ಲಾರೆನ್ಸ್, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ವಡಿವೇಲು, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ಮುಂತಾದವರು ನಟಿಸಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ.