ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರಿಗೆ 50ಲಕ್ಷ ರೂ. ಪರಿಹಾರಕ್ಕೆ ಹೆಚ್.ಡಿ.ಕೆ ಆಗ್ರಹ
ಮೃತಪಟ್ಟ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಪರಿಹಾರ ನೀಡಿ ಎಂದ ಕುಮಾರಸ್ವಾಮಿ
ಬೆಂಗಳೂರು: ಉಪಚುನಾವಣೆಯ ಕರ್ತವ್ಯದಲ್ಲಿ ದುಡಿದು ಕೊರೋನಾ ಸೋಂಕಿನಿಂದ ಮೃತಪಟ್ಟಿರಿವ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಕನಿಷ್ಠ 50ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಚುನಾವಣೆಯ ಕರ್ತವ್ಯ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಹೈದರಾಬಾದ್-ಕರ್ನಾಟಕದಲ್ಲಿ 145ಕ್ಕೂ ಹೆಚ್ಚು ಶಿಕ್ಷಕರು ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.
ಹಾಗೆ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
— H D Kumaraswamy (@hd_kumaraswamy) May 24, 2021 ">1/4
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ.
1/4