ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ

 

ಬೆಂಗಳೂರು: ಬೆಂಗಳೂರಿನ ಛಲವಾದಿಪಾಳ್ಯದ ಫ್ಲವರ್ ಗಾರ್ಡೆನ್ ಬಳಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆ ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನಡೆದಿದೆ.

ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ಆಗಿದ್ದ ರೇಖಾ ಕದಿರೇಶ್ ತನ್ನ ಆಫಿಸಿನ ಒಳಗಿದ್ದ ವೇಳೆ ಆಕೆಯನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದ ಗಾಯಾಳು ರೇಖಾರನ್ನ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರೇಖಾ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ, ಕಾಟನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.