ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಏರಿಕೆ

ಕಳೆದ 24 ಗಂಟೆಗಳಲ್ಲಿ 67,208 ಹೊಸ ಕೋವಿಡ್ ಪ್ರಕರಣಗಳು ಪತ್ತೆ

 

ನವದೆಹಲಿ: ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗುತ್ತಿದ್ದ ಕೊರೋನಾ ಸೋಂಕಿನ ಸಂಖ್ಯೆ ಗುರುವಾರ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67,208 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. 2,330 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 1,03,570 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,84,91,670ಕ್ಕೆ ತಲುಪಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳು ಕಾಣಿಸಿಕೊಂಡಿವೆ.