ಮೇ 10ರಿಂದ 14 ದಿನ ರಾಜ್ಯದಲ್ಲಿ ಲಾಕ್ ಡೌನ್: ಸಿಎಂ ಯಡಿಯೂರಪ್ಪ
ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ
Updated: May 7, 2021, 20:57 IST
ಬೆಂಗಳೂರು: ರಾಜ್ಯದಲ್ಲಿ ಮೇ 10 ಬೆಳಗ್ಗೆ 6 ರಿಂದ 24ರ ಬೆಳಗ್ಗೆ 6ರವರೆಗೆ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಮಾತಕತೆ ನಡೆಸಿದ ನಂತರ ಸಿಎಂ ಯಡಿಯೂರಪ್ಪ ಅವರು ಅಧಿಕೃತ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಕೋವಿಡ್ ಪರಿಷ್ಕೃತ ಮಾರ್ಗಸೂಚಿ:
- ಮೇ 10 ಸೋಮವಾರ ಬೆಳಗ್ಗೆ 6 ರಿಂದ 24ರ ಬೆಳಗ್ಗೆ 6 ರವರೆಗೆ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್
- ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಹಾಲು, ದಿನಸಿ ಅಂಗಡಿ ತೆರೆಯಲು ಅವಕಾಶ
- ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಳ್ಳುವಗಾಡಿಯಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ
- ಆಸ್ಪತ್ರೆ, ಮೆಡಿಕಲ್ ಶಾಪ್, ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
- ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮತ್ತು ಹೋಂ ಡೆಲಿವೆರಿ ಸೇವೆಗೆ ಅನುಮತಿ
- ಬಾರ್ ಮದ್ಯ ಮರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಗ್ಗೆ 6ರಿಂದ 10ಗಂಟೆಯವರೆಗೆ ಮಾತ್ರ ತೆರೆಯಲಿವೆ.
- ಹೋಟೆಗಳಿಗೆ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡು ಹೋಗಬೇಕು ವಾಹನಗಳಲ್ಲಿ ತೆರಳಿದರೆ ಶಿಕ್ಷೆ
- ಸಿನೆಮಾ, ಮಾಲ್, ಪಬ್, ಜಿಮ್, ಕ್ರೀಡಾ ಸಮುಚ್ಚಯ, ಈಜುಕೊಳ, ಕೈಗಾರಿಕೆ ಎಲ್ಲಾ ಕ್ಲೋಸ್
- ಸರ್ಕಾರಿ ಕಚೇರಿಗಳು ಭಾಗಶಃ ಕೆಲಸ ಮಾಡಲಿವೆ.
- ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ತುರ್ತು ವಾಹನ, ಆಟೋ, ಟ್ಯಾಕ್ಸಿ ಸೇವೆಗಳಿಗೆ ಅವಕಾಶ
- ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲಾ ರೀತಿಯ ಸಂಚಾರಕ್ಕೆ ನಿರ್ಬಂಧ
- ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ
- ಕೃಷಿ ಸಂಬಂಧಿತ ಚಟುವಟಿಕೆಗೆ ಅವಕಾಶ
- ಧಾರ್ಮಿಕ ಕೇಂದ್ರ ಬಂದ್, ಇದ್ದರೂ ಪೂಜೆಗೆ ಅವಕಾಶ
- ಈಗಾಗಲೇ ನಿಗದಿಯಾಗಿರುವ ಮದುವೆಗಳಿಗೆ ಅವಕಾಶ, ಆದರೆ 50 ಜನ ಸೇರಲು ಮಿತಿ
- ಅಂತ್ಯಸಂಸ್ಕಾರಕ್ಕೆ ಕೇವಲ 5ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ
- ರಸ್ತೆ ಕಾಮಗಾರಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ
- ಯಾವುದೇ ಪಾಸ್ ವ್ಯವಸ್ಥೆ ಜಾರಿ ಇರುವುದಿಲ್ಲ
- ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ
- ಈ-ಕಾಮರ್ಸಿ ಸೇವೆಗಳಿಗೆ ಅವಕಾಶ
- ಅಗತ್ಯ ಸೇವೆಗಳಿಗೆ ಬಿಟ್ಟು ಅನವಶ್ಯಕವಾಗಿ ವಾಹನಗಳನ್ನು ಚಲಾಯಿಸುವಂತಿಲ್ಲ.