ದೇಶದ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

63 ದಿನಗಳ ನಂತರ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣ ದಾಖಲು

 

ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ತೀವ್ರ ಇಳಿಕೆ ಕಂಡಿದ್ದು, 63 ದಿನಗಳ ನಂತರ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಮತ್ರ ಪತ್ತೆಯಾಗಿವೆ.

ಕಳೆದ 24 ಗಂಟೆಯಲ್ಲಿ 2123 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಸಾವಿನ ಪ್ರಮಾಣ ಕಳೆದ 46 ದಿನಗಳಲ್ಲಿಯೇ ಕನಿಷ್ಠವಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,82,282 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ದೇಶದಲ್ಲಿ ಗುಣಮುಖರಾದವರು ಸಂಖ್ಯೆ 2,73,41,462ಕ್ಕೆ ಮುಟ್ಟಿದೆ. ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಹಾಗೆ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಒಡಿಸ್ಸಾ ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.