ದೇಶದಲ್ಲಿ 46,148 ಕೋವಿಡ್ ಪ್ರಕರಣಗಳು ದಾಖಲು

ಕಳೆದ 24 ಗಂಟೆಯಲ್ಲಿ 979 ಸೋಂಕಿತರು ಸಾವು

 

ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 46,148 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 979 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆ ಸಮಯದಲ್ಲಿ 58,578 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,93,09,607ಕ್ಕೆ ತಲುಪಿದೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 5,72,994 ಮಾತ್ರ ಇದೆ.  

ಕೇರಳ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಸಾವುಗಳು ದಾಖಲಾಗಿವೆ.