ಕೋವಿಡ್ ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಅಪಾಯಕಾರಿ

ಮಹಾ ಸರ್ಕಾರಕ್ಕೆ ಮಹಾರಾಷ್ಟ್ರ ಕೋವಿಡ್ ಟಾಸ್ಕ್ ಫೋರ್ಸ್ ಎಚ್ಚರಿಕೆ

 

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕೋವಿಡ್ ಮೂರನೇ ಅಲೆ ಇಂದೆಂದಿಗಿಂತಲೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳಲಿವೆ ಎಂದು ಮಹಾರಾಷ್ಟ್ರ ಕೋವಿಡ್ ಟಾಸ್ಕ್ ಫೋರ್ಸ್ ಮತ್ತು ವೈದ್ಯಕೀಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಕಾಣಿಸಿಕೊಂಡಿರುವ 'ಡೆಲ್ಟಾ ಪ್ಲಸ್ ವೈರಸ್' ಮಹಾರಾಷ್ಟ್ರದಲ್ಲಿ ಇಂದಿಗಿಂತ ಎರಡು ಪಟ್ಟು ಹೆಚ್ಚು ಹರಡಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹಾಜರಾಗಿದ್ದ ಸಭೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಸರಿಯಾಗಿ ಅನುಸರಿಸದೇ ಇದ್ದರೆ ಎರಡನೇ ಅಲೆಯಿಂದ ಹೊರಬರುವುದರ ಒಳಗಾಗಿ ಮಹಾರಾಷ್ಟ್ರ ಮೂರನೇ ಅಲೆಯಲ್ಲಿ ಸಿಲುಕಬಹುದು ಎಂದು ಟಾಸ್ಕ್ ಫೋರ್ಸ್ ನ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಟಾಸ್ಕ್ ಫೋರ್ಸ್ ನ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಪಕರಣಗಳು, ಔಷಧಗಳನ್ನು ಸರಿಯಾದ ಪ್ರಮಾಣದಲ್ಲಿ ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ.

ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಮಹಾರಾಷ್ಟ್ರದಲ್ಲಿ ಸುಮಾರು ಎಂಟು ಲಕ್ಷ ಜನರಿಗೆ ತಗುಲಬಹುದು, ಅದರಿಲ್ಲಿ ಶೇಖಡ 10% ಮಕ್ಕಳಿಗೆ ತಗುಲಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ಆದ್ದರಿಂದ ಉದ್ಧಾವ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಹೆಚ್ಚು ಜನ ಒಟ್ಟಿಗೆ ಸೆರದಂತೆ, ಕೋವಿಡ್ ನಿಯಮಗಳನ್ನು ಪಾಲಿಸಿವಂತೆ ಅಜ್ಞಾಪಿಸಿದ್ದಾರೆ.