ಕರೋನಾ ಸಂಕಷ್ಟದ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣ: ಕೆಪಿಸಿಸಿ ಆರೋಪ
ರಾಜ್ಯದ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿರುವ ಕೆಪಿಸಿಸಿ
ಬೆಂಗಳೂರು: ಕರೋನಾ ಸಂಕಷ್ಟದ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಕರ್ನಾಟಕ ಪ್ರದಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ಕೋವಿಡ್ ಸಂಕಷ್ಟದ ಕಾಲದಲ್ಲೂ ಸರಿಯಾಗಿ ಸ್ಪಂದಿಸದ ಸರ್ಕಾರಗಳಿಗೆ ಚಾಟಿ ಬೀಸಿದ ನ್ಯಾಯಾಂಗದ ನಡೆತೆಯನ್ನು ವಿಮರ್ಶೆ ಮಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರ ಹೇಳಿಕೆಗಳ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಈ ಹಿನ್ನೆಲೆ ರಾಜ್ಯದ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿರುವ ಕೆಪಿಸಿಸಿ ‘ಕುಣಿಲಾರದವನು ನೆಲನೇ ಡೊಂಕು ಎಂದಂತೆ ಜನಪರ ಚಿಂತನೆ ಇಲ್ಲದ ಅಸಮರ್ಥ ಬಿಜೆಪಿ ಸರ್ಕಾರಕ್ಕೆ ಪ್ರತಿಯೊಂದು ವಿಷಯದಲ್ಲೂ ಹೈಕೋರ್ಟ್ ಮಾನಿಟರ್ ಮಾಡಬೇಕಾದ ಸ್ಥಿತಿ ಬಂದಿದ್ದು ದುರ್ದೈವ. ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ’. ಕರೋನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಹೇಳಿದೆ.
ಕುಣಿಲಾರದವನು ನೆಲನೇ ಡೊಂಕು ಎಂದಂತೆ ಜನಪರ ಚಿಂತನೆ ಇಲ್ಲದ ಅಸಮರ್ಥ ಬಿಜೆಪಿ ಸರ್ಕಾರಕ್ಕೆ ಪ್ರತಿಯೊಂದು ವಿಷಯದಲ್ಲೂ ಹೈಕೋರ್ಟ್ ಮಾನಿಟರ್ ಮಾಡಬೇಕಾದ ಸ್ಥಿತಿ ಬಂದಿದ್ದು ದುರ್ದೈವ.
ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ.
ಕರೋನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ. pic.twitter.com/f64aQGUxw4
ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ.
ಕರೋನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ. pic.twitter.com/f64aQGUxw4 — Karnataka Congress (@INCKarnataka) May 14, 2021