ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ನಿಧನ

 

ಚಂಡೀಗಡ: ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಅವರು ಶಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದರು. ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಚಂಡೀಗಡದ ಆಸ್ಪತ್ರೆಯೊಂದಕ್ಕೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅನಾರೋಗ್ಯದ ಪರಿಸ್ಥಿತಿ ಮತ್ತೆ ಉಲ್ಬಣಗೊಂಡ ಹಿನ್ನೆಲೆ ಕೊನೆಯುಸಿರೆಳೆದಿದ್ದಾರೆ.

1958ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಪದಕ ಗೆದಿದ್ದ ಇವರು, ಏಷ್ಯನ್ ಗೇಮ್ಸ್ ನಲ್ಲಿ ನಾಲ್ಕು ಬಾರಿ ಚಿನ್ನದ ಪದಕ ಗೆದಿದ್ದರು. 1960ರ ರೋಮ್ ಒಲಂಪಿಕ್ಸ್ ನಲ್ಲಿ 400 ಮೀಟರ್ ಓಟದಲ್ಲಿ ಫೈನಲ್ ತಲುಪಿದ್ದು ಅವರು ಐತಿಹಾಸಿಕ ಸಾಧನೆಯಾಗಿತ್ತು.

ಭಾಗ್ ಮಿಲ್ಖಾ ಸಿಂಗ್ ಎಂದೇ ಖ್ಯಾತಿ ಪಡೆದಿದ್ದ ಇವರು, ಭಾರತೀಯ ಸೇನೆಯಲ್ಲೂ ಕಾರ್ಯನಿರ್ವಹಿಸಿದ್ದರು, ಪಂಜಾಬ್ ಸರ್ಕಾರದಲ್ಲಿ ಕ್ರೀಡಾ ನಿರ್ದೇಶಕರಾಗಿಯೂ ಕಾರ್ಯು ನಿರ್ವಹಿಸಿದ್ದರು.