ದೇಶದಲ್ಲಿ ಎರಡು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ

ಸಾವಿನ ಪ್ರಮಾಣದಲ್ಲೂ ಇಳಿಕೆ ಎಂದು ಮಾಹಿತಿ ನೀಡಿದ ಲವ್ ಅಗರ್ವಾಲ್

 | 
ದೇಶದಲ್ಲಿ ಎರಡು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ: ದೇಶದಲ್ಲಿ ಎರಡು ದಿನಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ, ಕೋವಿಡ್ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದೆ, ದೆಹಲಿ, ಮಹಾರಾಷ್ಟ ಸೇರಿದಂತೆ 13 ರಾಜ್ಯಗಳಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಕೋವಿಡ್ ಕುರಿತ ಮಾಹಿತಿ ಹಂಚಿಕೊಂಡುರುವ ಅವರು, ದೆಹಲಿ, ಪಂಜಾಬ್, ಜಾರ್ಖಾಂಡ್, ಮಹಾರಾಷ್ಟ್ರ, ಉತ್ತರಪ್ರದೇಶ  ಸೇರಿದಂತೆ 13 ರಾಜ್ಯಗಳಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ಆದರೆ, ಬಿಹಾರ, ರಾಜಸ್ಥಾನ, ಹರಿಯಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯನ್ನೇ ತೋರುತ್ತಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ, ಗುಜರಾತ್, ದೆಹಲಿ, ಹರಿಯಾಣ, ಉತ್ತರಪ್ರದೇಶ, ಕರ್ನಾಟಕ, ಬಿಹಾರ್, ಪಶ್ಚಿಮಬಂಗಾಳ ಆಂಧ್ರ ಸೇರಿದಂತೆ 12 ರಾಜ್ಯಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳು ಇವೆ, ಏಳು ರಾಜ್ಯಗಳಲ್ಲಿ ಒಂದು 50 ಸಾವಿರದಂದ 1 ಲಕ್ಷ ಸಕ್ರೀಯ ಪ್ರಕರಣಗಳು ಮತ್ತು 17ರಾಜ್ಯಗಳಲ್ಲಿ 50 ಸಾವಿರಕ್ಕಿಂತ ಹೆಚ್ಚು ಸಕ್ರೀಯ ಸೋಂಕಿನ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದ್ದಾರೆ.