ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನ

ಹಲವು ಗಣ್ಯ ವ್ಯಕ್ತಿಗಳಿಂದ ಸಂತಾಪ

 | 
Sanchari vijay

ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನರಾಗಿದ್ದಾರೆ.

ಬೆಂಗಳೂರಿನ ಜೆ.ಪಿ ನಗರದಲ್ಲಿ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರ ಗಾಯಗೊಂಡಿದ್ದರು ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವ ವಾದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ ಅವರ ಮೆದುಳು ನಿಷ್ಕೃಯಗೊಂಡ ಹಿನ್ನೆಲೆ ಸಂಚಾರಿ ವಿಜಯ್ ನಿಧನರಾಗಿದ್ದಾರೆ.

ನಟ ಸಂಚಾರಿ ವಿಜಯ್ ಅವರು ನಿಧನರಾಗಿರುವ ಹಿನ್ನೆಲೆ ಹಲವು ಸಿನಿಮಾರಂಗದ ಗಣ್ಯರು ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ನಟ ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್, ಚೇತನ್ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿ.ಎಸ್ ಅಶ್ವತ್ಥ ನಾರಾಯಣ್, ಸಚಿವ ಶ್ರೀರಾಮುಲು, ಸಚಿವ ಸಿ.ಟಿ ರವಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.