ಲಾಕ್ಡೌನ್: ರಾಜ್ಯ ಸರ್ಕಾರದಿಂದ 1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ

ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

 | 
ಲಾಕ್ಡೌನ್: ರಾಜ್ಯ ಸರ್ಕಾರದಿಂದ 1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ಹಿನ್ನೆಲೆ 1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ.  ಈ ಪ್ಯಾಕೇಜ್ ಹಲವು ಅಸಂಘಟಿತ ಕಾರ್ಮಿಕರು, ರೈತರು, ದಿನಗೂಲಿ ನೌಕರರಿಗೆ, ತೀವ್ರ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ಅನುಕೂಲವಾಗಲಿದೆ.  

ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಲಾಕ್ಡೌನ್ ಮೇ 24ರವರೆಗೆ ಜಾರಿಯಲ್ಲಿರಲಿದ್ದು, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ಬಂಧದಿಂದ ವ್ಯಾಪಾರ-ವಾಣಿಜ್ಯ ಚಟುವಟಿಕೆ ಕ್ಷೀಣಿಸಿದೆ ಸಮಾಜದ ಹಲವು ವರ್ಗಗಳ ಜನರ ಬದುಕಿನ ಮೇಲೆ ತೀವ್ರ ಹೊಡೆತ ಬಿದ್ದಿದೆ, ಇದರ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಸರ್ಕಾರ ಯಾವತ್ತಿಗೂ ಜನರ ಪರವಾಗಿರುತ್ತದೆ ಎಂದು ಆಶ್ವಾಸನೆ ನೀಡುತ್ತೇನೆ ಎಂದರು.

ಮುಖ್ಯಮಂತ್ರಿಗಳು ಪ್ರಕಟಿಸಿದ ಪರಿಹಾರ ಪ್ಯಾಕೇಜ್:

ಹಣ್ಣು ಮತ್ತು ತರಕಾರಿ ಮತ್ತು ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂಪಾಯಿಗಳನ್ನು ಘೋಷಿಸಲಾಗಿದೆ ಇದರಿಂದ 60ರಿಂದ 70 ಸಾವಿರ ರೈತರಿಗೆ ಅನುಕೂಲವಾಗಲಿದೆ.

ಲೈಸೆನ್ಸ್ ಹೊಂದಿದ ನೋಂದಣಿ ಮಾಡಿಸಿರುವ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ತಲಾ 3 ಸಾವಿರ ರೂಪಾಯಿಗಳನ್ನು ಘೋಷಿಸಲಾಗಿದೆ.

ರಸ್ತೆ ಬದಿ ವ್ಯಾಪಾರಿಗಳು, ಚಮ್ಮಾರರು, ಕಮ್ಮಾರರು, ಮಡಿವಾಳರು, ಚಿಂದಿ ಆಯುವವರು, ಹಮಾಲಿಗಳಿಗೆ ತಲಾ 2000 ರೂಪಾಯಿಗಳನ್ನು ಘೋಷಿಸಲಾಗಿದೆ ಇದರಿಂದ 2 ಲಕ್ಷದ 20 ಸಾವಿರ ಜನರಿಗೆ ಅನುಕೂಲವಾಗಲಿದೆ.

ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಮೆಕ್ಯಾನಿಕ್, ಮನೆಗೆಲಸದವರು, ಕುಂಬಾರರಿಗೆ 2000 ರೂಪಾಯಿ ಘೋಷಣೆ.

ಕಲಾವಿದರು, ಕಲಾವಿದರ ತಂಡಗಳಿಗೆ ತಲಾ 3 ಸಾವಿರ ರೂಪಾಯಿಗಳನ್ನು ಘೋಷಿಸಲಾಗಿದ್ದು ಇರಿದಂದ 16 ಸಾವಿರ ಜನಕ್ಕೆ ಸಹಾಯವಾಗಲಿದೆ.

ಹಾಗೆ ರೈತರು, ಸ್ವಸಹಾಯ ಸಂಘಗಳು, ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕುಗಳು, ಭೂ ಅಭಿವೃದ್ಧಿ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ರೈತರ ಸಣ್ಣ ಮತ್ತು ಮಧ್ಯಮ ಗಾತ್ರದ ಸಾಲ ಮರುಪಾವತಿ ದಿನಾಂಕವನನ್ನು 1.5.2020 ರಿಂದ ಮರುಪಾವತಿ ಸಾಲದ ಕಂತಿನ ದಿನಾಂಕವನ್ನು 31.7.2021 ರವರೆಗೆ ವಿಸ್ತರಣೆ ಮಾಡಲಾಗಿದೆ.