ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಆಗಿ ಘೋಷಣೆ

ಕೊರೋನಾ ಕಂಟ್ರೋಲ್ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ

 | 
BS Yediyurappa

ಬೆಂಗಳೂರು: ಕೋವಿಡ್ ಮಹಾಮಾರಿಯ ಎರಡನೇ ಅಲೆ ರಾಜ್ಯದ ನಾಗರಗಳನ್ನು ವ್ಯಾಪಿಸಿದ ನಂತರ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚು ಹರಡುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.  

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು' ಎಂದಿದ್ದಾರೆ.