ಬೆಂಗಳೂರಿನಲ್ಲೂ ಪತ್ತೆಯಾದ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್

ಮಾಹಿತಿಯನ್ನು ದೃಢಪಡಿಸಿದ ಆರೋಗ್ಯ ಸಚಿವ ಸುಧಾಕರ್

 | 
Representative Image

ಬೆಂಗಳೂರು: ರಾಜ್ಯದ ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಇದೀಗ ಬೆಂಗಳೂರಿನಲ್ಲೂ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿರುವುದನ್ನು ಆರೋಗ್ಯ ಸಚಿವ ಸುಧಾಕರ್ ದೃಢಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳವಾರ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ದಾಖಲಾಗಿತ್ತು ಬುಧವಾರ ಬೆಂಗಳೂರಿನಲ್ಲೂ ಪತ್ತೆಯಾಗಿದೆ. ಇದರೊಂದಿಗೆ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕಿತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕಿತ ರೋಗಿಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.