ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ ಉದಾಸಿ ನಿಧನ
ಸಿ.ಎಂ ಉದಾಸಿ ನಿಧನ ಹಿನ್ನೆಲೆ ಗಣ್ಯರ ಸಂತಾಪ
Jun 8, 2021, 16:30 IST
| ಬೆಂಗಳೂರು: ಹಾನಗಲ್ ಕ್ಷೆತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸಿ.ಎಂ ಉದಾಸಿಯವರು ನಿಧನರಾಗಿದ್ದಾರೆ. ಧೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮಧ್ಯಾಹ್ನ 2 ಗಂಟೆಗೆ ನಿಧನರಾಗಿದ್ದಾರೆ.
81 ವರ್ಷದ ಉದಾಸಿಯವರು ರಕ್ತ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿಯವರ ಕುಟುಂಬಸ್ಥರು ತಿಳಿಸಿದ್ದಾರೆ.
ಸಿ.ಎಂ ಉದಾಸಿಯವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಎಸ್ ಈಶ್ವರಪ್ಪ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.