ಕೋವಿಡ್ ನಿಯಂತ್ರಣಕ್ಕೆ ಬಂದರೆ SSLC ಪರೀಕ್ಷೆ: ಸಿಎಂ ಹೇಳಿಕೆ

ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಆಗದಿದ್ದರೆ ಪರೀಕ್ಷೆ ಇಲ್ಲ

 | 
BS Yediyurappa

ಬೆಳಗಾವಿ:  ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ನಡೆಸಲಾಗುವುದು, ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಆಗಿಲಿಲ್ಲದಿದ್ದರೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ್ವಿತೀ ಪಿಯುಸಿ ಪರೀಕ್ಷಯನ್ನು ರದ್ದು ಮಾಡಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರ ಬನ್ನಿಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದು ಈಗಿನ ಸದ್ಯದ ನಿರ್ಧಾರ. ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.