ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಕೆ

500 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

 | 
BS Yediyurappa

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಜೂನ್ 14 ರ ಬೆಳಗ್ಗೆ 6ಗಂಟೆಯ ವರೆಗೆ ಲಾಕ್ ಡೌನ್ ಯತಾಸ್ಥಿತಿಯಲ್ಲೇ ಮುಂದುವರಿಯಲಿದೆ ಎಂದು ತಿಳಿಸಿದ್ದು, 500 ಕೋಟಿ ರೂಪಾಯಿಗಳ ಲಾಕ್ ಡೌನ್ ಪಾಕೇಜ್ ನ್ನು ಘೊಷಿಸಿದ್ದಾರೆ.

ಲಾಕ್ಡೌನ್ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಈಗಾಗಲೇ ವಿಧಿಸಲಾಗಿರುವ ನಿಯಮಾವಳಿಗಳಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಲಾಗುವುದಿಲ್ಲ ಎಂದು ಸ್ಪಷ್ಟಡಿಸಿದರು.

ಇದೇ ವೇಳೆ ಮೀನುಗಾರರು, ನೇಕಾರರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಖಾಸಗಿ ಶಿಕ್ಷಕರು, ಸಿನೆಮಾ ಕಾರ್ಮಿಕರು, ಮುಜರಾಯಿ ಇಲಾಖೆ ಅರ್ಚಕರು, ಇಮಾಮ್, ಮೌಲ್ವಿಗಳು, ಅನುದಾನ ರಹಿತ ಶಿಕ್ಷಕರರಿಗೆ ಬಿ.ಎಸ್ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.