ದ್ವಿತೀಯ ಪಿಯು ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದತಿ ತೀರ್ಮಾನ ಇಲ್ಲ: ಸುರೇಶ್ ಕುಮಾರ್

ವಿಧ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮ ಗಮನದಲ್ಲಿರಿಸಿಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ

 | 
ದ್ವಿತೀಯ ಪಿಯು ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದತಿ ತೀರ್ಮಾನ ಇಲ್ಲ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ತೀವ್ರವಾಗುತ್ತಿರುವ ಹಿನ್ನೆಲೆ ಈಗಾಗಲೇ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಗಳನ್ನು ರದ್ದು ಮಾಡುವ ಬಗ್ಗೆ ನಾವು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೆಲ ಮಾಧ್ಯಮಗಳ ಈ ಬಗ್ಗೆ ಉಹಾಪೋಹದ ಸುದ್ದಿಗಳನ್ನು ಪ್ರಕಟಿಸುತ್ತಿದ್ದು, ವಿಧ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಆದ್ದರಿಂದ ವಿಧ್ಯಾರ್ಥಿಗಳು ಇದಕ್ಕೆ ತಲೆಕೊಡದೆ ಓದಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

.