ಪ್ರಥಮ ಪಿಯು ವಿಧ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

 | 
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಇದೇ ತಿಂಗಳ 24 ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷೆ  ಆರಂಭವಾಗುವುದಕ್ಕೆ ಇನ್ನು 15-20 ದಿನ ಇರುವ ಮುಂದೆಯೇ ತಿಳಿಸಲಾಗುತ್ತದೆ. ಪರೀಕ್ಷೆ ಮುಂದೂಡಿರುವುದರಿಂದ ವಿಧ್ಯಾರ್ಥಿಗಳು ಯಾರೂ ವಿಚಲಿತರಾಗುವುದು ಬೇಡ ಎಂದಿನಂತೆ ನಿಮ್ಮ ವಿಧ್ಯಾಭ್ಯಾಸವನ್ನು ಮುಂದುವರಿಸಿ ಎಂದು ಸುರೇಶ್ ಹೇಳಿದ್ದಾರೆ

ದ್ವಿತೀಯ ಪಿಯಿಸಿ ಪರೀಕ್ಷೆಯ ನಂತರ ನಡೆಸಬೇಕೆಂದು ನಿರ್ಧರಿಸಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಕೋವಿಡ್ ಕಾರಣ ರದ್ದುಪಡಿಲಾಗಿದೆ. ಪ್ರಥಮ ಪಿಯು ವಿಧ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದರು.

ದ್ವಿತೀಯ ಪಿಯು ಪರೀಕ್ಷೆಯನ್ನು ಮೂಂದೂಡಿರುವುದರಿಂದ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಪಿಯು ಉಪನ್ಯಾಸಕರಿಗೆ ತಿಳಿಸಿದ್ದು, ಅವರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ಸೂಚಿಸಲಾಗಿದ್ದು, ಪಠ್ಯ ಬೋಧನಾ ಕ್ರಮಗಳನ್ನು ವಿದ್ಯಾರ್ಥಿಗಳೊಂದಿಗೆ ಚರ್ಚಿಸಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.