ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ

 | 
Suresh Kumar

ಬೆಂಗಳೂರು: ರಾಜ್ಯದಲ್ಲಿ 2021 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿರುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಈಗಾಗಲೇ ಕೇಂದ್ರದ ಸಿಬಿಎಸ್ಇ ಮತ್ತು ಐಸಿಎಸ್ಇ 10ನೇ ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಪಿಯಿ ಮತ್ತು 10ನೇ ತರಗತಿಯ ಪರಿಕ್ಷೆಗಳ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದರು.

ಮಕ್ಕಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಭವಿಷ್ಯ ದನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಗನ್ನು ರದ್ದು ಮಾಡಲಾಗಿದ್ದು, ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.