ಈ ಬಾರಿ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಸ್​ಎಸ್​ಎಲ್​ಸಿ ಪರೀಕ್ಷೆ

ಭಿನ್ನ ಪರೀಕ್ಷೆಯ ಮಾದರಿ ತಿಳಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

 | 
Suresh Kumar

ಬೆಂಗಳೂರು: ರಾಜ್ಯದಲ್ಲಿ 2021ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಭಿನ್ನ ರೀತಿಯಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಲ್ಲ. ಕಳೆದ ವರ್ಷದ ಆಧಾರದ ಮೇಲೆ ಪಾಸ್​ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ. ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲಿದ್ದಾರೆ ಎಂದರು. 

ಎಸ್​ಎಸ್​ಎಲ್​ಸಿಯ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ​, ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ವಿದ್ಯಾರ್ಥಿಗಳು ಆತಂಕಪಡುವ ಆಗತ್ಯವಿಲ್ಲ. ಇದೇ ರೀತಿ ಇನ್ನೊಂದು ಪತ್ರಿಕೆ ಭಾಷಾ ವಿಷಯಗಳು ಇರಲಿವೆ ಎಂದು ತಿಳಿಸಿದ್ದಾರೆ.

ಒಂದು ಕೊಠಡಿಯಲ್ಲಿ 10-12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ಗಳನ್ನು ನೀಡಲಾಗುತ್ತದೆ. ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಗ್ರೇಡಿಂಗ್ ಮಾಡರಯಲ್ಲಿ ಫಲಿತಾಂಶಗಳು ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.