ಕೊರೋನಾ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತುಹೋಗಿದೆ, ಹೀಗಾಗಿ ಅರಾಜಕತೆ ಸೃಷ್ಟಿಯಾಗಿದೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಮುಖಮಂತ್ರಿ ಹಾಗೂ ವಿಪಕ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಕೊರೋನಾ ತಡೆಗಟ್ಟುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲಾವಾಗಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತುಹೋಗಿದೆ, ಹೀಗಾಗಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದರು.
ರಾಜ್ಯ ಸರ್ಕಾರ ಹೆಚ್ಚು ರೋಗಿಗಳು ಪತ್ತೆಯಾಗಬಾರದು ಎಂಬ ಕಾರಣಕ್ಕೆ ಕೊರೋನಾ ಪರೀಕ್ಷೆ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಆರೋಪಿಸಿದ ಅವರು, ಲಸಿಕೆಯೊಂದೇ ಕೊರೋನಾದಿಂದ ಪಾರಾಗುವ ಶಾಸ್ವತ ಪರಿಹಾರ, ಅದಕ್ಕಾಗಿ ಜನರು ತಪ್ಪದೆ ಲಸಿಕೆ ಪಡೆದುಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ನಿಮ್ಮ ರಕ್ಷಣೆಯ ಜೊತೆಗೆ ಬೇರೆಯವರನ್ನೂ ರಕ್ಷಣೇ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯಾಗಿದೆ. ಆಕ್ಸಿಜನ್ ಇಲ್ಲದೆ ಜನ ಸಾಯುತ್ತಿದ್ದಾರೆ. ಸೋಂಕು ನಿಯಂತ್ರಣ ಮತ್ತು ಸೋಂಕಿತರ ರಕ್ಷಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೇರಡೂ ಸರಿಯಾದ ತಯಾರಿ ಮಾಡಿಕೊಂಡಿಲ್ಲ. ಆಕ್ಸಿಜನ್ ಸಮಸ್ಯೆಯನ್ನು ಶಿಘ್ರವೇ ಪರಹರಿಸಬೇಕು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಹೇಳಿದರೂ ಕೇಂದ್ರ ಸರ್ಕಾರ ಇನ್ನೂ ಹೆಚ್ಚುವರಿ ಆಕ್ಸಿಜನ್ ನೀಡುತ್ತಿಲ್ಲ, ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಿಸಿಕೊಳ್ಳಲು ಕೇಂದ್ರ ಬಿಡುತ್ತಿಲ್ಲ, ಕೇಂದ್ರ ಸರ್ಕಾರಕ್ಕೆ ಬದ್ಧತೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.
ಕೊರೋನಾ ನಿಯಂತ್ರಣದ ವಿಚಾರದಲ್ಲಿ ಸರ್ಕಾರಕ್ಕೆ ನಮ್ಮ ಸಹಾಕಾರ ಇದ್ದೇ ಇರುತ್ತದೆ ಆದರೆ, ಸರ್ಕಾರ ಆಸ್ಪತ್ರೆ, ಆಕ್ಸಿಜನ, ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿ ಕಲ್ಲು ಮಣ್ಣುಳ್ಳ ರಾಗಿಯನ್ನು ನೀಡಿಲಾಗುತ್ತಿದೆ. ಉತ್ಪಾದಕರನ್ನು ದುಡಿಯುವ ವರ್ಗಕ್ಕೆ ಮತ್ತು ಉತ್ಪಾದಕರಿಗೆ ಸರ್ಕಾರ ಆರ್ಥಿಕ ಸಹಾಯ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ನೆರೆ ರಾಜ್ಯಗಳಲ್ಲಿ ಪ್ಯಾಕೆಜ್ ನೀಡಲಾಗಿದೆ. ಬಡವರು, ಕೂಲಿ ಕಾರ್ಮಿಕರು, ಆಟೋ ರಿಕ್ಷ ಚಾಲಕರು ಮತ್ತು ಕಾರ್ ಚಾಲಕರಿಗೆ ವಿಶೇಷ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.