ಸಚಿವರಿಗೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡಲು ಸಿಎಂ ಸೂಚನೆ

ಪೂರ್ಣ ಪ್ರಮಾಣದ ಲಾಕ್ ಡೌನ್ ಗೆ ಸಿಎಂ ಯೋಚನೆ!

 | 
CM yediyurappa

ಬೆಂಗಳೂರು: ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ ಸಚಿವರುಗಳು ಜಿಲ್ಲೆಗಳಲ್ಲೇ ವಾಸ್ತವ್ಯ ಹೂಡಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಶ್ರಮಿಸಬೇಕು ಎಂದು ತನ್ನ ಸಂಪುಟ ಸಹೊದ್ಯೋಗಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕೋವಿಡ್ ತಡೆಗಟ್ಟವ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮಾತನಾಡಿದ ಅವರು, ನಾವು ಪ್ರಧಾನಿ ಮೋದಿಯವರ ದೇಶಕ್ಕಾಗಿ ಕಾಯುತ್ತಿದ್ದೇವೆ, ಅವರು ನೀಡುವ ದೇಶವನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಆಯಾ ಜಿಲ್ಲೆಗಳ ಸ್ತುವಾರಿ ಸಚಿವರುಗಳನ್ನು ಈಗಾಗಲೇ ಅವರ ಜಿಲ್ಲೆಗಳಿಗೆ ಕಳುಹಿಸಿದ್ದು, ಜಿಲ್ಲೆಗಳಲ್ಲಿ ಇರುವ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ನಿರ್ದೇಶಿಸಲಗಿದೆ. ಈಗಾಗಲೇ ಆಯಾ ಜಿಲ್ಲೆಗಳ ಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಿಗೆ ತೆರಳಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದ್ದಾರೆ.