ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ನಿಧನ

 | 
dilip kumar dies in mumbai hospital

ಮುಂಬೈ: ಬಾಲಿವುಡ್ ಚಿತ್ರರಂಗದ ಖ್ಯಾತ ನಟ ದಿಲೀಪ್ ಕುಮಾರ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಉಸಿರಾಟ ಸಮಸ್ಯೆ ಕಾಣಿಸಿಕೊಂಡದ್ದ ದಿಲೀಪ್ ಕುಮಾರ್ ಅವರನ್ನು ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸಾವಿನ ಕುರಿತು ಆಸ್ಪತ್ರೆಯ ಸಿಬ್ಬಂದಿಗಳು ಖಚಿತಪಡಿಸಿದ್ದಾರೆ.

1922 ಡಿಸೆಂಬರ್ 11ರಂದು ಪೇಶಾವಾರದಲ್ಲಿ ಜನಸಿದ್ದ ದಿಲೀಪ್ ಕುಮಾರ್(ಮಹಮ್ಮದ್ ಯೂಸುಫ್ ಖಾನ್). ನಂತರ ಮುಂಬೈಗೆ ಸ್ಥಳಾಂತರಗೊಂಡು ಇಲ್ಲೆ ನೆಲೆಸಿದ್ದರು. ನಂತರ ಬಾಲಿ ವುಡ್ ಚಿತ್ರರಂಗವನ್ನು ಪ್ರವೇಶಿಸಿ ಹಲವು ಹೆಸರಾಂತ ಸಿನೆಮಾಗಳಲ್ಲಿ ನಟಿಸಿ ಪದ್ಮಭೂಷಣ, ಪದ್ಮವಿಭೂಷಣ, ದಾದಾಸಾಹೇಬ್ ಪಾಲ್ಕೆ ಸೇರಿದಂತೆ ಹಲವು ಪುರಸ್ಕಾರಗಳನ್ನು ಪಡೆದಿದ್ದರು.