ನಟ ವಿಜಯ ರಾಘವೇಂದ್ರ ಪತ್ನಿಗೆ ಹೃದಯಾಘಾತ, ಬೆಳ್ತಂಗಡಿಯ ಸ್ಪಂದನ ನಿಧನ

 | 
vijay raghavendra

ಕಳೆದ ವಿಧಾನ ಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅಕ್ಕ ಸ್ಪಂದನ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ  ಪ್ರೀತಿಸಿ  ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.

ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು (Dead Body) ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದಿದ್ದಾರೆ ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್. ಇಂದು ಮರಣೋತ್ತರ (Postmortem) ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ಪ್ರಕ್ರಿಯೆಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ.

ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ಪ್ರಕ್ರಿಯೆಗಳು ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ಪ್ರಕ್ರಿಯೆಗಳು ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ (Bangalore) ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದಿದ್ದಾರೆ ಹರಿಪ್ರಸಾದ್.