ಸಂಚಾರಿ ವಿಜಯ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಗಣ್ಯರು

ಇಂದು ಸಂಜೆ ವಿಜಯ್ ಹುಟ್ಟುರಾದ ಕಡೂರಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ

 | 
dead body of sanchari vijay

ಬೆಂಗಳೂರು: ಬೈಕ್ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಈ ವೇಳೆ ಹಲವು ಗಣ್ಯರು ಅವರು ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ

ಇವರ ಪಾರ್ಥಿವ ಶರೀರವನ್ನು ನಟ ಶಿವರಾಜ್ ಕುಮಾರ್, ಧನಂಜಯ್, ನೀನಾಸಂ ಸಂತೀಶ್, ರಂಗಾಯಣ ರಘು, ದೊಡ್ಡಣ್ಣ, ನಟಿ ಪಾರೂಲ್ ಯಾದವ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ದರ್ಶನ ಪಡೆದರು.

ವಿಜಯ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮವಾದ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ನೆರವೇರಲಿದೆ, ನಂತರ ಸಂಜೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ.