ದೇಶದಲ್ಲಿ 50,848 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ನಿನ್ನೆಗಿಂತ ಇಂದು ಶೇಖಡ 19% ಹೆಚ್ಚು ಪ್ರಕರಣಗಳು ದಾಖಲು

 | 
Representative Image

ನವದೆಹಲಿ: ದೇಶದಲ್ಲಿ ಕೋರೊನಾ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದೆ ಆದರೂ. ನಿನ್ನೆಗಿಂತ ಇಂದು ಶೇಖಡ 19% ಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ 24 ಗಂಟೆಯಲ್ಲಿ 50,848 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹಾಗೆ ಇದೇ ಅವಧಿಯಲ್ಲಿ 1,358 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 68,817 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,89,94,8 ಕ್ಕೆ ಮುಟ್ಟಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,43,194ಕ್ಕೆ ತಲುಪಿದೆ.

ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ.