ದೇಶದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ
ಕಳೆದ 24 ಗಂಟೆಯಲ್ಲಿ 54,069 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದ್ದ ಕೊರೋನಾ ಸೋಂಕು ಇಂದು ಮತ್ತೆ ಏರಿಕೆಯಾಗಿರುವುದು ಕಂಡು ಬಂದಿದೆ. ಬಾರತದಲ್ಲಿ ಕಳೆದ 24 ಗಂಟೆಯಲ್ಲಿ 54,069 ಕೋವಿಡ್ ಹೊಸ ಸೋಂಕಿನ ಪ್ರಕರಣಗಳು ಕಾಣಿಸಿಕೊಂಡಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಮೂರು ಕೋಟಿ ಗಡಿ ದಾಟಿದೆ.
ಕಳೆದ 24 ಗಂಟೆಯಲ್ಲಿ 1,321 ಕೋವಿಡ್ ರೋಗಿಗಳು ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ಸೋಂಕಿಗೆ ಒಟ್ಟು 3,91,981 ಜನ ಬಲಿಯಾದಂತಾಗಿದೆ. ಕಳೆದ 24 ಗಂಟೆ ಸಮಯದಲ್ಲಿ 68,885 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,90,63,740ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 6,27,057 ಮಾತ್ರ ಇದೆ.
ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರ ಮತ್ತು ಕಾರ್ನಾಟಕ ಈ ಎರಡೂ ರಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಜಾಸ್ತಿ ಇವೆ.