ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಖ್ಯಮಂತ್ರಿಗಳಿಂದ ತೀರ್ಮಾನ: ಗೃಹ ಸಚಿವ

ಸಚಿವರ ಜೊತೆ ಸಭೆ ನಡೆಸಿ ನಿರ್ಧಾರ

 | 
basavaraj bommai

ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ನಂತರ ಲಾಕ್ ಮಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜೂನ್ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಗೃಹ ಇಲಾಖೆ ಕೋವಿಡ್ ನಿಯಂತ್ರಿಸಲು ಜೂನ್ 30 ವರೆಗೆ ಬಿಗಿ ಕ್ರಮ ಕೈಗೊಳ್ಳೂವಂತೆ ಸೂಚನೆ ನೀಡಿದೆ. ಹೀಗಾಗಿ ಇದನ್ನು ಯಾವ ರೀತಿ ಜಾರಿ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರು, ಸಚಿವರ ಜೊತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.

ರಜ್ಯದಲ್ಲಿ ಪಾಸಿಟಿವ್ ದರ ಶೇಕಡ 10ಕ್ಕಿಂತ ಹೆಚ್ಚಿದೆ. 10 ಕ್ಕಿಂತ ಕಡಿಮೆ ಬರುವ ತನಕ ಲಾಕ್​ಡೌನ್ ನಲ್ಲಿ ಸಡಿಲಿಕೆ ಕಷ್ಟ. ಗ್ರಾಮೀಣ ಪ್ರದೇಶಗಳಲ್ಲೂ ಸೋಂಕು ನಿಯಂತ್ರಣಕ್ಕೆ ಬರಬೇಕು. ಮ್ಮ ಗುರಿ ಸೋಂಕು ಪ್ರಮಾಣವನ್ನು ಕಡಿಮೆ ಮಾಡುವುದು ಎಂದು ತಿಳಿಸಿದ್ದಾರೆ.