ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆಗೆ ನಿರ್ಧಾರ

ರಾಷ್ಟ್ರಾದ್ಯಂತ ಜೂನ್ 11ರಂದು ಸಾಂಕೇತಿಕ ಪ್ರತಿಭಟನೆಗೆ ಕಾಂಗ್ರಸ್ ಕರೆ

 | 
Representative Image

ನವದೆಹಲಿ: ದೇಶದಲ್ಲಿ ಇಂಧನ ಬೆಲೆ ದಿನೇ ದಿನೆ ಏರಿಕೆಯಾಗಿತ್ತುದ್ದೆ. ಇದನ್ನು ಖಂಡಿಸಿ ರಾಷ್ಟ್ರಾದ್ಯಂತ ಜೂನ್ 11ರಂದು ಸಾಂಕೇತಿಕ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಪಕ್ಷದ ಎಲ್ಲಾ ರಾಜ್ಯ ಘಟಕಗಳೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ರಿಕೆ ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಸೂಚಿಸಿದ್ದಾರೆ.

ಆರ್ಥಿಕ ಸಂಕಷ್ಟ ನಿರುದ್ಯೋಗ ಕೊರೋನಾ ನಡುವೆಯೂ ಇಂಧನದ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ದೇಶದ ಬಹುಪಾಲು ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿಗಳನ್ನು ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು,, ಇದರಿಂದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿನ್ನೆಲೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಅಭಿಯಾನ ನಡೆಸುವಂತೆ ಸೂಚಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.