ದೇಶದಲ್ಲಿ 1.32 ಲಕ್ಷ ಕೊರೋನಾ ಪ್ರಕರಣಗಳು ಪತ್ತೆ, 3.207 ಸಾವು

ಇಳಿಕೆಯ ಹಾದಿಯಲ್ಲೇ ಸಾಗಿದ ಕೊರೋನಾ ಸೋಂಕು

 | 
Representative Image

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಈಗ ಇಳಿಕೆಯ ಹಾದಿಯಲ್ಲೇ ಸಾಗಿದ್ದು, ಕಳೆದ 24 ಗಂಟೆಯಲ್ಲಿ 1.32 ಲಕ್ಷ ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಹಾಗೆ ಕೋವಿಡ್ ಸೋಂಕಿತರ ಮೃತರ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 3,207 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ದೇಶದಲ್ಲಿ 17,93,645 ಸಕ್ರಿಯ ಪ್ರಕರಣಗಳವೆ. ಕಳೆದ 24 ಗಂಟೆಗಳಲ್ಲಿ 2,31,456 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,61,79,085ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ. ಒಟ್ಟು ಮೃತರ ಸಂಖ್ಯೆ 3,35,102ಕ್ಕೆ ತಲುಪಿದೆ.

ತಮಿಳುನಾಡಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಅಲ್ಲಿ 26,513 ಪ್ರಕರಣಗಳು ಪತ್ತೆಯಾಗಿವೆ, ಕೇರಳದಲ್ಲಿ 19,760 ಪ್ರಕರಣಗಳು ಪತ್ತೆಯಾಗಿವೆ, ಕರ್ನಾಟಕದಲ್ಲಿ 14,304 ಪರಕರಣಗಳು, ಮಹಾರಾಷ್ಟ್ರದಲ್ಲಿ 14,123 ಪ್ರಕರಣಗಳು, ಆಂಧ್ರಪ್ರಧೇಶದಲ್ಲಿ 11,303 ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ, ಕೊರೋನಾದಿಂದ ಮಹಾರಾಷ್ಟ್ರದಲ್ಲಿ 854, ತಮಿಳುನಾಡಿನಲ್ಲಿ 490 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.