ನೇಣು ಬಿಗಿದು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ

ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಘಟನೆ

 | 
ನೇಣು ಬಿಗಿದು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ

ಹಾವೇರಿ: 70 ವರ್ಷ ವಯಸ್ಸಿನ ಕೋವಿಡ್ ರೋಗಿಯೊಬ್ಬರು ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ರಾಣೆಬೆನ್ನೂರಿನ ಲಮಾಣಿ ಜನಾಂಗಕ್ಕೆ ಸೇರಿದ ವರು ಮೇ 3ನೇ ತಾರಿಖಿನಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದರು, ಇವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದು, ಅವರಿಗೆ ಸೋಂಕು ಉಲ್ಬಣಸಿದ್ದರಿಂದ ಮೇ. 5ರಂದು ಹಾವೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೆ, ಅವರು ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್ ನ ಬಾಗಿಲಿನ ಹಿಂಭಾಗ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ಡ್ ನಲ್ಲಿದ್ದ ಎಲ್ಲರೂ ಮಲಗಿದ ಮೇಲೆ ಇವರು ಕೊನೇ ನಿರ್ಧಾರ ತೆಗೆದುಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಚಿಕಿತ್ಸೆಯಲ್ಲಿ ಯಾವುದೇ ತೊಡಕುಗಳಿರಲಿಲ್ಲ, ಅವರಿಗೆ ಸರಿಯಾಗಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಹತಾಶೆಗೊಳಗಾಗಿ ಈ ರೀತಿ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ.