ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಆಕ್ಸಿಜನ್ ಕೊರತೆ.!

ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಗೆ ಐವರು ಸೋಂಕಿತರ ಸಾವು ಶಂಕೆ

 | 
Hubli press meet

ಹುಬ್ಬಳ್ಳಿ: ಚಾಮರಾಜನಗರ ಕಲ್ಬುರ್ಗಿ ನಂತರ ದೀಗ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಐವರು ಕೊರೋನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಲೈಪ್ ಲೈನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿಯೇ ಸಾವು ಸಂಭವಿಸಿವೆ ಎಂದು ಶಂಕೆ ವ್ಯಕ್ತವಾಗಿದ್ದು, ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಸ್ಥಳಕ್ಕೆ ಡಿಎಚ್ ಓ ಯಶವಂತ್ ಮದನಿಕರ ಸೇರಿದಂತೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.