ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜ್ವರ

ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ

 | 
siddharamaiah

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.

ಜ್ವರ ಬಂದ ಸಿದ್ದರಾಮಯ್ಯ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ವೈದ್ಯರು ತಪಾಷಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ ಎಂದು ತಿಳಿದು ಬಂದಿದ್ದು. ಜ್ವರದ ಹಿನ್ನೆಲೆ ಸಿದ್ದರಾಮಯ್ಯ ಅವರ ಎರಡು ದಿನಗಳ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.