ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ: ಎಂ.ಬಿ ಪಾಟೀಲ

ನಾನು ಇತರರಂತೆ ಸಿಎಂ ಹುದ್ದೆಯ ಆಕಾಂಕ್ಷಿ ಎಂದ ಕಾಂಗ್ರೆಸ್ ಮುಖಂಡ

 | 
MB patila

ಮೈಸೂರು: ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ, ನಾನು ಇತರರಂತೆ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಂ.ಬಿ ಪಾಟೀಲ್ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. 

ಮೈಸೂರಿನಲ್ಲಿರುವ ಸುತ್ತೂರು ಮಠದ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿಯನ್ನು ಬಾನುವಾರ ಭೇಟಿ ಮಾಡಲು ಬಂದಿದ್ದ ವೇಳೆ ಮಾತನಾಡಿದ ಅವರು, ಸಿಎಂ ಆಗುವ ಆಸೆ ಎಲ್ಲರಿಗೂ ಇರುತ್ತದೆ, ಆಸೆ ಇಟ್ಟುಕೊಳ್ಳುವುದು ತಪ್ಪಲ್ಲ ಆದರೆ, ದುರಾಸೆ ತಪ್ಪು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿಚಾರದಲ್ಲಿ ಕೆಲವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆದರೆ, ಹೈಕಮಾಂಡ ಅಂತಹ ಮಾತುಗಳಿಗೆ ಕಡಿವಾಣ ಹಾಕಲು ಹೇಳಿದೆ. ಹೈಕಮಾಂಡ್ ಆದೇಶವನ್ನು ನಾನೂ ಸೇರಿದಂತೆ ಎಲ್ಲಾರೂ ಪಾಲಿಸಲೇಬೇಕು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಎಂದೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ ಚುನಾವಣೆ ಎದುರಿಸಿಲ್ಲ. ಸಾಮೂಹಿಕವಾಗಿ ಚುನಾವಣೆ ಎದುರಿಸಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಅಧಿಕಾರಿ ಹಿಡಿಯುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.