ದೇಶದಲ್ಲಿ 1.34 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ, 2,887 ಸೋಂಕಿತರ ಸಾವು

ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಪ್ರಕರಣಗಳು ಪತ್ತೆ

 | 
Representative Image

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.34 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಹಾಗೆ ಕಳೆದ 24 ಗಂಟೆಯಲ್ಲಿ 2,887 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಪ್ರಕರಣಗಳು ಕಾಣಿಸಿಕೊಡಿದ್ದು, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ 17,13,413 ಸಕ್ರಿಯ ಪ್ರಕರಣಗಳು ಇವೆ ಎಂದು ಪ್ರಕಟಣೆ ತಿಳಿಸಿದೆ.

ತಮಿಳುನಾಡಿನಲ್ಲಿ 25,317 ಪ್ರಕರಣಗಳು, ಕೇರಳದಲ್ಲಿ 19,661 ಪ್ರಕರಣಗಳು, ಕರ್ನಾಟಕದಲ್ಲಿ 16,387 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 15,169 ಪ್ರಕರಣಗಳು, ಆಂಧ್ರಪ್ರದೇಶದಲ್ಲಿ 12,768 ಪ್ರಕರಣಗಳು ಪತ್ತೆಯಾಗಿವೆ.