ದೇಶದಲ್ಲಿ 60,753 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆ

ಇಳಿಕೆಯ ಹಾದಿಯಲ್ಲೇ ಸಾಗಿದ ಕೋವಿಡ್ ಸೋಂಕು

 | 
Representative Image

ನವದೆಹಲಿ: ದೇಶದಲ್ಲಿ ಕೋರೊನಾ ಸೋಂಕಿನ ಪ್ರಕರಣಗಳ ಸಂಖ್ಯೆಯ ಇಳಿಕೆಯ ಹಾದಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 60,753 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಹಾಗೆ 1,647 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 97,743 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಕೊರೋನಾ ಸೋಂಕಿನಿಂದ ಗುಣಮುಖರಾದವರು ಸಂಖ್ಯೆ 2,86,78,390 ಕ್ಕೆ ಮುಟ್ಟಿದೆ.

ಕೇರಳದಲ್ಲಿ 11,361 ಪ್ರಕರಗಳು, ಮಹಾರಾಷ್ಟ್ರದಲ್ಲಿ 9,798 ಪ್ರಕರಣಗಳು, ತಮಿಳುನಾಡಿನಲ್ಲಿ 8,633 ಪ್ರಕರಣಗಳು, ಆಂಧ್ರಪ್ರದೇಶದಲ್ಲಿ 6,341 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 5,783 ಪ್ರಕರಣಗಳು ಕಾಣಿಸಿಕೊಂಡಿವೆ. ಈ ಐದು ರಾಜ್ಯಗಳಿಂದ ದೇಸದಲ್ಲಿ ಶೇಖಡ 69% ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ.