ದೇಶದಲ್ಲಿ 48,698 ಕೋವಿಡ್ ಪ್ರಕರಣಗಳು ದಾಖಲು

ಕಳೆದ 24 ಗಂಟೆಯಲ್ಲಿ 1,183 ಸೋಂಕಿತರು ಸಾವು

 | 
Representative Image

ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕಳೆದ ಎರಡ್ಮೂರು ದಿನಗಳಿಂದ ಏರಿಳಿತ ಕಂಡಿದ್ದ ಸೋಂಕಿನ ಪ್ರಮಾಣದಲ್ಲಿ ಇಂದು ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 48,698 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಇದೇ ಅವಧಿಯಲ್ಲಿ 1,183 ಸೋಂಕಿತರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆ ಸಮಯದಲ್ಲಿ 64,818 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,91,93,085ಕ್ಕೆ ತಲುಪಿದೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 5,95,565 ಮಾತ್ರ ಇದೆ.  

ಕೇರಳ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಹೆಚ್ಚು ಸಾವುಗಳು ದಾಖಲಾಗಿವೆ.