ದೇಶದಲ್ಲಿ 62,224 ಹೊಸ ಕೊರೋನಾ ಪ್ರಕರಣ ಪತ್ತೆ

2,542 ಸೋಂಕಿತರ ಸಾವು

 | 
Representative Image

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 62,224 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಂಡಿವೆ. ಹಾಗೆ ಕಳೆದ 24 ಗಂಟೆಯಲ್ಲಿ 2,542 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 1,07,628 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆ ಸಕ್ರಿಯ ಪ್ರಕರಣಗಳ ಸಂಖ್ಯೆ 8,65,432ಕ್ಕೆ ಇಳಿಕೆಯಾಗಿದೆ.

ಕೇರಳದಲ್ಲಿ 12,246 ಪ್ರಕರಣಗಳು, ತಮಿಳುನಾಡಿನಲ್ಲಿ 11,805 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 7,652 ಪ್ರಕರಣಗಳು, ಆಂಧ್ರಪ್ರದೇಶದಲ್ಲಿ 5,741 ಪ್ರಕರಣಗಳು, ಕರ್ನಾಟಕದಲ್ಲಿ 5,041 ಪ್ರಕರಣಗಳು ಪತ್ತೆಯಾಗಿವೆ. ಈ ಐದು ರಾಜ್ಯಗಳಿಂದ ಶೇಖಡ 68.28 ರಷ್ಟು ಪ್ರಕರಣಗಳು ಪತ್ತೆಯಾಗಿವೆ.