ಕೋರೊನಾ ಸೋಂಕಿನ ಅಬ್ಬರ ಭಾರೀ ಇಳಿಕೆ
ಕಳೆದ 91 ದಿನಗಳಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಪ್ರಕರಣ ದಾಖಲು
ನವದೆಹಲಿ: ದೇಶದಲ್ಲಿ ಕೋರೊನಾ ಸೋಂಕಿನ ಅಬ್ಬರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕಳೆದ 91 ದಿನಗಳಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 42,640 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹಾಗೆ ಇದೇ ಅವಧಿಯಲ್ಲಿ 1,167 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 81,839 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,89,26,038 ಕ್ಕೆ ಮುಟ್ಟಿದೆ.
ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 7,449 ಪ್ರಕರಗಳು, ತಮಿಳುನಾಡಿನಲ್ಲಿ 7,427 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 6,270 ಪ್ರಕರಣಗಳು, ಕರ್ನಾಟಕದಲ್ಲಿ 4,867 ಪ್ರಕರಣಗಳು, ಒಡಿಸ್ಸಾದಲ್ಲಿ 3,031 ಪ್ರಕರಣಗಳು ಕಾಣಿಸಿಕೊಂಡಿವೆ. ಈ ಐದು ರಾಜ್ಯಗಳಿಂದ ದೇಸದಲ್ಲಿ ಶೇಖಡ 70% ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕೇರಳ ರಾಜ್ಯ ಒಂದರಲ್ಲೇ 17.47% ಹೊಸ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿನಿಂದ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಸಾವುಗಳು ಸಂಭವಿಸಿವೆ.