ಕೊರೋನಾ ನಿಯಂತ್ರಣಕ್ಕೆ ಲಾಕ್ಡೌನ್ ಅನಿವಾರ್ಯವಾಗಬಹುದು
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು: ಇನ್ನು ಒಂದೆರಡು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ನೀಡಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಅಣ್ಣಮದೇವಿ ದರ್ಶನ ಪಡೆದು ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯವಾಗಬಹುದು, ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಜನರು ಜನತಾ ಕರ್ಫ್ಯೂಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಹೀಗಾಗಿ ಇನ್ನಷ್ಟು ಕಠಿಣ ಕ್ರಮ ಅನಿವಾರ್ಯ ಎಂದರು.
ಲಾಕ್ ಡೌನ್ ಹೇರಿಕೆ ಕುರಿತು ತಜ್ಞರು, ಅಧಿಕಾರಿಗಳು, ಜೊತೆ ಇಂದು-ನಾಳೆ ಕುಳಿತು ಚರ್ಚಿಸಿ ಸಮಾಲೋಚನೆ ನಡೆಸಿ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ದೇಶದಿಂದ ತೊಲಗಬೇಕಾದರೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಮತ್ತು ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಹಕಾರ ನೀಡಬೇಕು, ಜನರ ಸಹಕಾರ ಇಲ್ಲದಿದ್ದರೆ ಸರ್ಕಾರದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.