ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಗೆ ಮೊದಲ ಬಲಿ
ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಓರ್ವ ಮಹಿಳೆ ಡೆಲ್ಟಾ ಪ್ಲಸ್ ವೈರಸ್ ನಿಂದ ಸಾವು
ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ದೇಶದಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ನಿಂದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಕೋವಿಡ್ ನಿಂದ ಮೃತಪಟ್ಟಿದ್ದ ವ್ಯಕ್ತಿಯ ಸ್ಯಂಪಲ್ ತೆಗೆದು ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ನಡೆಸಿದ ವೇಳೆ ಮಹಿಳೆಗೆ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಇತ್ತೆಂಬುದು ತಿಳಿದುಬಂದಿದೆ.
ಮಧ್ಯಪ್ರದೇಶದಲ್ಲಿ ಒಟ್ಟು ಐವರಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿದ್ದು, ಭೋಪಾಲ್ ನಲ್ಲಿ ಮೂರು ಮತ್ತು ಉಜ್ಜೈನಿಯಲ್ಲಿ ಉಳಿದ ಇಬ್ಬರಿಲ್ಲಿ ಕಾಣಿಸಿಕೊಂಡಿದೆ. ಮಧ್ಯಪ್ರದೇಶದಲ್ಲಿ ಪತ್ತೆಯಾಗಿದ್ದ ಐದು ಪ್ರಕರಣಗಳಲ್ಲಿ ನಾಲ್ವರು ಗುಣಮುಖರಾಗಿದ್ದಾರೆ. ಆದರೆ, ಓರ್ವ ಮಹಿಳೆ ಮಾತ್ರ ಮೃತಪಟ್ಟಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಹಾಗೆ, ಜಮ್ಮುಕಾಶ್ಮೀರದಲ್ಲಿ ಪತ್ತೆಯಾಗಿದ್ದ ಮೊದಲ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ರೋಗಿ ಈಗ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ ಆಗಿದ್ದ 39 ವರ್ಷದ ಜಮ್ಮುವಿನ ವ್ಯಕ್ತಿಯಲ್ಲಿ ಮೊದಲ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿತ್ತು ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಮತ್ತು ಡೀನ್ ಆಗಿರುವ ಶಶಿ ಸುಧನ್ ಶರ್ಮಾ ತಿಳಿಸಿದ್ದಾರೆ.