ಕೊರೋನಾ 2ನೇ ಅಲೆಯಲ್ಲಿ ರಾಜ್ಯದ 9 ವೈದ್ಯರ ಸಾವು

ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಸಚಿವ ಡಾ.ಕೆ ಸುಧಾಕರ್

 | 
Dr. k sudhakar

ಬೆಂಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕದಿಂದ 646 ವೈದ್ಯರು ಮೃತಪಟ್ಟಿದ್ದಾರೆ. ಇದರಲ್ಲಿ ರಾಜ್ಯದ 9 ವೈದ್ಯರು ಅಸುನೀಗಿರುವುದಾಗಿ ಭಾರತೀಯ ವೈದ್ಯಕೀಯ ಸಂಘ ಬಿಡುಗಡೆ ಮಾಡಿರುವ ಪಟ್ಟಿಯನ್ನು ಡಾ.ಕೆ ಸುಧಾಕರ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಕೋವಿಡ್ ವಾರಿಯರ್ಸ್ ಗಳ ರಕ್ಷಣೆಯಲ್ಲಿ ನಮ್ಮ ಸರ್ಕಾರ ಕೈಗೊಂಡ ಮಹತ್ತರ ಹೆಜ್ಜೆಯಿಂದಾಗಿ ರಾಜ್ಯದಲ್ಲಿನ ವೈದ್ಯರ ಸಾವಿನ ಸಂಖ್ಯೆಯಲ್ಲಿ ಕಡಿಮೆಯಾಗಿರುವುದಾಗಿ ಸಚಿವರು ತಿಳಿಸಿದ್ದಾರೆ.