ಬೆಂಗಳೂರಿನಲ್ಲಿ ಕೊರೋನಾ ಸೋಂಕು ಇಳಿಮುಖ: ಸಚಿವ ಸುಧಾಕರ್

ರಾಜ್ಯದಲ್ಲಿ ಈವರೆಗೆ 446 ಬ್ಲಾಕ್ ಫಂಗಸ್ ಪ್ರಕರಣಗಳು ದಾಖಲು

 | 
D. K sudhakar

ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಹಾಗೆ ಸಾವಿನ ಪ್ರಮಾಣವೂ ಇಳಿಮುಖವಾಗಿದೆ. ಕೆಲವು ಜಿಲ್ಲೆಗಳಲ್ಲೂ ಸೋಂಕು ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾವಿರಾರು ಗ್ರಾಮಗಳು ಕೋವಿಡ್ ಮುಕ್ತವಾಗಿವೆ. ಆದ್ದರಿಂದ ಕೋವಿಡ್ ಮುಕ್ತ ಗ್ರಾಮಗಳನ್ನು ಗುರುತಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬ್ಲಾಕ್ ಫಂಗಸ್ ಕುರಿತು ಮಾತರನಾಡಿದ ಅವರು, ರಾಜ್ಯದಲ್ಲಿ ಈವರೆಗೆ 446 ಬ್ಲಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಒಟ್ಟು 12 ಜನ ಸಾವನ್ನಪ್ಪಿದ್ದು, 433 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ದೇಶದಲ್ಲಿ ಒಟ್ಟು 9 ಸಾವಿರ ಬ್ಲಾಕ್ ಫಂಗಸ್ ಪ್ರಕರಣಗಳು ಕಂಡುಬಂದಿವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಔಷಧಿಗಳನ್ನು ಳುಹಿಸುತ್ತಿದೆ. ಆಸ್ಪತ್ರೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಲಾಗಿದ್ದು, ಸೋಂಕಿತರ ಚಿಕಿತ್ಸೆಯನ್ನು ಸಂಬಂಧಿಕರು ನೋಡಬಹುದು ಎಂದು ತಿಳಿಸಿದರು.

ಆಶಾ ಕಾರ್ಯಕರ್ತೆಯ ವೇತನ ವಿಚಾರವಾಗಿ ಮಾತನಾಡಿದ ಸಚಿವ ಸುಧಾಕರ್, 17 ಜಿಲ್ಲೆಗಳಲ್ಲಿ ವೇತನ ನೀಡಲಾಗಿದೆ. ಉಳಿದ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಇನ್ನೆರಡು ದಿನದಲ್ಲಿ ವೇತನ ಕೈ ಸೇರಲಿದೆ ಎಂದು ಹೇಳಿದ್ದಾರೆ.