ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

 | 
Yediyurappa and Arun singh

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬದಲಾವಣೆ ಮಾಡಲ್ಲ, ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಕೋವಿಡ್ ಸಂಕಷ್ಟದ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ, ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ, ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಇನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಕೂಡ ತೆಗೆಯುವುದಿಲ್ಲ, ಇವೆಲ್ಲಾ ಸುದ್ದಿಗಳು ಕೇವಲ ಕಾಲ್ಪನಿಕ ಎಂದು ಹೇಳುವ ಮೂಲಕ ಬದಲಾವಣೆಗೆ ಸಂಬಂಧಿಸಿದಂತೆ ಪದೇ ಪದೇ ಕೇಳಿಬರುತ್ತಿರುವ ಊಹಾಪೋಹದ ಮಾತುಗಳಿಗೆ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.