ಭಾರತದಲ್ಲಿ 40ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪತ್ತೆ

ಎಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಆದೇಶ

 | 
Representative Image

ನವದೆಹಲಿ: ದೇಶದಲ್ಲಿ 40ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ರೂಪಾಂತರಿ ಕೋವಿಡ್ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ. ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆ ನೀಡಿತ್ತು.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ 21 ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಕಾಣಿಸಿಕೊಂಡಿವೆ. ಮಧ್ಯಪ್ರದೇಶದಲ್ಲಿ 6 ಪ್ರಕರಣಗಳು, ಕೇರಳದಲ್ಲಿ 3 ಪ್ರಕರಣಗಳು, ತಮಿಳುನಾಡಿನಲ್ಲಿ 3 ಪ್ರಕರಣಗಳು, ಕರ್ನಾಟಕದಲ್ಲಿ 2 ಪ್ರಕರಣಗಳು, ಪಂಜಾಬ್, ಆಂಧ್ರಪ್ರದೇಶ, ಮತ್ತು ಜಮ್ಮವಿನಲ್ಲಿ ತಲಾ ಒಂದೊಂದು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಪತ್ತೆಯಾಗಿವೆ.

ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಮೊದಲು ಮಹಾರಾಷ್ಟ್ರದ ರತ್ನಗಿರಿ, ಜಲ್ಗಾಂ, ಕೇರಳದ ಪಲಕ್ಕಾಡ್ ಮತ್ತು ಪತ್ತಿನಂತಿಟ್ಟು, ಮಧ್ಯಪ್ರದೇಶದ ಭೋಪಾಲ್ ಮತ್ತು ಶಿಪಪುರಿಯಲ್ಲಿ ಕಾಣಿಸಿಕೊಂಡವು ಎಂದು ಎಂದು ಸರ್ಕಾರದ ಸಲಹಾ ಸಮಿತಿ ತಿಳಿಸಿದೆ.

ಮಹಾರಾಷ್ಟ್ರ ಸರ್ಕಾರ ಈ ಪ್ರಕರಣಗಳ ಬಗ್ಗೆ ವಿಶೇಷ ಕಾಲಜಿ ವಹಿಸಿದ್ದು, ಈ ಪ್ರಕರಣಗಳ ಪ್ರಯಾಣದ ಇತಿಹಾಸ ಮತ್ತು ಇತರೆ ದತ್ತಾಂಶಗಳನ್ನು ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ. ಹಾಗೆ ಇದನ್ನು ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಹೇಳಿದೆ.